January16, 2026
Friday, January 16, 2026
spot_img

ಕೃಷ್ಣಮೃಗ ಬೇಟೆ ಕೇಸ್‌: 7 ದಿನದೊಳಗೆ ವರದಿ ಸಲ್ಲಿಸುವಂತೆ ಸಚಿವ ಖಂಡ್ರೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಡೂರು ತಾಲೂಕಿನ ಬೀರೂರು ಸಮೀಪದ ಬಾಸೂರು ಕಾವಲಿನ ಕೃಷ್ಣಮೃಗಗಳ ಮೀಸಲು ಸಂರಕ್ಷಿತ ಪ್ರದೇಶದ ಪಕ್ಕದಲ್ಲೇ ನಡೆದ ಮೂರು ಕೃಷ್ಣಮೃಗಗಳ ಬೇಟೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಡಿ.23ರಂದು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ ಎರಡು ಹೆಣ್ಣು ಹಾಗೂ ಒಂದು ಗಂಡು ಕೃಷ್ಣಮೃಗಗಳನ್ನು ಬೇಟೆಯಾಡಲಾಗಿತ್ತು. ಹತ್ಯೆಗೀಡಾದ ಮೂರು ಕೃಷ್ಣಮೃಗಗಳು ಕೇವಲ ಎರಡು ವರ್ಷ ಪ್ರಾಯದವಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಏಳು ದಿನದೊಳಗೆ ಘಟನೆಯ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. 

ಈ ಪ್ರಕರಣದಲ್ಲಿ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಅಧಿಕಾರಿಗಳು ಘಟನೆ ನಡೆದ ದಿನ ಸಂಜೆ ಆರ್‌.ಎಫ್‌.ಓ. ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ನೀಡಿದ್ದರು. ಆದರೆ, ಅಂದೇ ಸಂಜೆ 4 ಗಂಟೆಯೊಳಗೆ ಮರಣೋತ್ತರ ಪರೀಕ್ಷೆ ನಡೆದಿರುವುದು ಶಂಕೆಗೆ ಕಾರಣವಾಗಿದೆ.

Must Read

error: Content is protected !!