January15, 2026
Thursday, January 15, 2026
spot_img

ದತ್ತ ಜಯಂತಿ ಫ್ಲೆಕ್ಸ್ ಮೇಲೆ ಬ್ಲೇಡ್ ವಾರ್: ಕಿಡಿಗೇಡಿಗಳ ಪತ್ತೆಗೆ ಪೊಲೀಸರ ಜಾಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿಸೆಂಬರ್ 2 ರಿಂದ 4 ರ ವರೆಗೆ ನಡೆಯಲಿರುವ ದತ್ತ ಜಯಂತಿ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಾಗಲೇ, ನಗರದಲ್ಲಿ ಕೋಮು ಪ್ರಚೋದನೆ ನೀಡುವಂತಹ ವಿಧ್ವಂಸಕ ಕೃತ್ಯವೊಂದು ನಡೆದಿದೆ. ನಗರದ ಐಜಿ ರಸ್ತೆಯಲ್ಲಿರುವ ಉರ್ದು ಶಾಲೆ ಮುಂಭಾಗದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರು ಅಳವಡಿಸಿದ್ದ ದತ್ತ ಜಯಂತಿ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಬ್ಲೇಡ್‌ನಿಂದ ಕತ್ತರಿಸಿ ಹರಿದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಫ್ಲೆಕ್ಸ್ ಧ್ವಂಸಗೊಳಿಸಿರುವ ಈ ಕೃತ್ಯವು ಸ್ಥಳೀಯರಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಚಿಕ್ಕಮಗಳೂರು ನಗರ ಪೊಲೀಸರು, ಯಾರ ದೂರಿನ ನಿರೀಕ್ಷೆಯಿಲ್ಲದೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಪೊಲೀಸ್ ಇಲಾಖೆ ತನಿಖೆಯನ್ನು ತೀವ್ರಗೊಳಿಸಿದೆ. ಪ್ರದೇಶದಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಸಮಾಜದ ಶಾಂತಿಗೆ ಭಂಗ ತಂದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆದಿದೆ.

Most Read

error: Content is protected !!