ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಗುಂಡ್ಯಡ್ಕ ಮಹಾಗಣಪತಿ ಕ್ರಶರ್‌ನಲ್ಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.
ಬಾಗಲಕೋಟೆ ಮೂಲದ ವೆಂಕಟೇಶ್ (32 ವ) ಎಂಬಾತನೇ ಸಾವೀಗೀಡಾದ ವ್ಯಕ್ತಿ. ಮಂಗಳವಾರ ಮಧ್ಯಾಹ್ನ ವೆಂಕಟೇಶ್ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವಘಢ ಸಂಭವಿಸಿದ್ದು, ಕೂಡಲೇ ಆತನನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿಮಧ್ಯೆ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಕಲ್ಲು ಸ್ಫೋಟದಿಂದ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದರೆ, ಆಕಸ್ಮಿಕವಾಗಿ ಕಲ್ಲು ಜಾರಿ ವೆಂಕಟೇಶ್ ತಲೆಗೆ ಬಿದ್ದ ಪರಿಣಾಮ ಸಾವು ಸಂಭವಿಸಿದೆ ಎಂದು ಮೃತರ ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.