ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಡಿಸೆಂಬರ್ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್ ಪ್ರತಾಪ್ರನ್ನು ಡಿಸೆಂಬರ್ 12 ಮಿಡಿಗೇಶಿ ಪೊಲೀಸರು ಬಂಧಿಸಿದ್ದರು. ಬಳಿಕ, ಪೊಲೀಸರು ಡ್ರೋನ್ ಪ್ರತಾಪ್ನನ್ನು ಡಿಸೆಂಬರ್ 13ರಂದು ಮಧುಗಿರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಡ್ರೋನ್ ಪ್ರತಾಪ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದರು.
ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.