Friday, March 31, 2023

Latest Posts

ಒಡಿಶಾದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು, ನಾಲ್ವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಒಡಿಶಾದ ಖುರ್ದಾ ಜಿಲ್ಲೆಯಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಭುವನೇಶ್ವರದಿಂದ 40 ಕಿ.ಮೀ ದೂರದಲ್ಲಿರುವ ತಂಗಿ ಪ್ರದೇಶದ ಭೂಸಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಬರುವ ಹೋಳಿ ಹಬ್ಬಕ್ಕಾಗಿ ಪಟಾಕಿ ತಯಾರಿಸುತ್ತಿರುವ ವೇಳೆ ಈ ಅಚಾತುರ್ಯ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಅಕ್ರಮ ಪಟಾಕಿ ಘಟಕ ಇದ್ದ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಜನರನ್ನು ರಕ್ಷಿಸಲು ಪ್ರಯತ್ನಿಸಿದರೂ ಕೂಡ ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮನೆಯಲ್ಲಿ ಪಟಾಕಿ ತಯಾರಿಸಲು ಆಡಳಿತದಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಅವರು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!