Tuesday, August 16, 2022

Latest Posts

ಕಾಬುಲ್‌ನಲ್ಲಿ‌ ಭೀಕರ ಬಾಂಬ್‌ ಸ್ಪೋಟಕ್ಕೆ 8 ಜನರು ಬಲಿ: ಕೃತ್ಯದ ಹೊಣೆಹೊತ್ತ ಐಎಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಶಿಯಾ ವಸತಿ ಪ್ರದೇಶದಲ್ಲಿ ನಡೆದ ಭೀಕರ ಬಾಬ್‌ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರಗಾಮಿ ಗುಂಪು ಹೊತ್ತುಕೊಂಡಿದೆ.
ಪಶ್ಚಿಮ ಕಾಬೂಲ್‌ನಲ್ಲಿ ತಾನು ನಡೆಸಿದ ನಡೆದ ದಾಳಿಯಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಐಎಸ್ ಉಗ್ರಗಾಮಿ ಸಂಘಟನೆ ಹೇಳಿಕೊಂಡಿದೆ.
ಜನನಿಬಿಡ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ತರಕಾರಿ ಗಾಡಿಯಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಮತ್ತು ಸ್ಫೋಟದ ಪರಿಣಾಮವಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಗಾಯಗೊಂಡರು ಮತ್ತು ಕೊಲ್ಲಲ್ಪಟ್ಟರು ಎಂದು ಎಂದು ಹೇಳಿದ್ದಾರೆ. ಹೆಚ್ಚಿನ ಗಾಯಾಳುಗಳಿಗೆ ಗಂಭೀರ ಗಾಯಗಳಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
2014 ರಿಂದ ಅಫ್ಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಸ್ ಅಂಗಸಂಸ್ಥೆಯು ದೇಶದ ಅತ್ಯಂತ ಗಂಭೀರವಾದ ಭದ್ರತಾ ಸವಾಲಾಗಿ ಪರಿಗಣಿಸಲ್ಪಟ್ಟಿದೆ. ಪ್ರಮುಖವಾಗಿ ಅಲ್ಪಸಂಖ್ಯಾತರಆದ ಶಿಯಾ ಸಮುದಾಯವನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ಐಎಸ್‌ ಹಲವಾರು ದಾಳಿಗಳನ್ನು ನಡೆಸುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss