ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೂರ್ವ ಗೋದಾವರಿ ಜಿಲ್ಲೆಯ ವಾಕಲಪುಡಿಯ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳ ಪೈಕಿ ಇಬ್ಬರನ್ನು ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನ್ವೇಯರ್ ಬೆಲ್ಟ್ ಸ್ಫೋಟಗೊಂಡಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಮಾಜಿ ಸಚಿವ ಕನ್ನಬಾಬು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿ ತನಿಖೆಗೆ ಆದೇಶಿಸಿದ್ದಾರೆ.