ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ಮೋದಿ ಇಡೀ ದಿನ ಮ್ಯಾರಥಾನ್ ಸಭೆ ನಡೆಸಲಿದ್ದಾರೆ. ಬ್ಲಾಸ್ಟ್ ವೇಳೆ ಭೂತಾನ್ ಪ್ರವಾಸದಲ್ಲಿದ್ದ ಪ್ರಧಾನಿ ಇಂದು ರಾಜಧಾನಿಗೆ ಮರಳಲಿದ್ದಾರೆ.
ಮೋದಿ ನೇತೃತ್ವದಲ್ಲಿ ಭದ್ರತಾ ಪಡೆಗಳ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ದೇಶದ ಭದ್ರತೆ ವಿಚಾರವಾಗಿ ಮಹತ್ವದ ಚರ್ಚೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾಪಡೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ದೆಹಲಿ ಸಿಎಂ ರೇಖಾ ಗುಪ್ತಾ ಸಂತ್ರಸ್ತರ ಕುಟುಂಬಗಳಿಗೆ 10 ಲಕ್ಷ ರೂ.ಗಳ ಪರಿಹಾರವನ್ನ ಘೋಷಿಸಿದ್ದಾರೆ. ಕಾರು ಸ್ಫೋಟದಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ 10 ಲಕ್ಷ ರೂ., ಶಾಶ್ವತ ಅಂಗವಿಕಲರಾದವರಿಗೆ 5 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ.

