ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳೆ ದೆಹಲಿಯ ಚಾಂದಿನಿ ಚೌಕ್‌ನಲ್ಲಿ ಗುರುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಾನಿಕ್ಸ್ ಸಗಟು ಮಾರುಕಟ್ಟೆಗೆ ಸೇರಿದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಆರಂಭದಲ್ಲಿ 18 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬೆಂಕಿ ಹತೋಟಿಗೆ ತರಲು ಸಾಧ್ಯವಾಗಲಿಲ್ಲ. ಆದ್ದರಿಂದ ಘಟನಾ ಸ್ಥಳದಲ್ಲಿ ಸುಮಾರು 40 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುತ್ತಿರುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ ಬೆಂಕಿಯ ಅಪಾಯ ಹೆಚ್ಚಿರುವ ಸಾಧ್ಯತೆ ಇದೆ. ಸದ್ಯ ಬೆಂಕಿ ಅವಘಡ ಸಂಭವಿಸಿದ ಕಟ್ಟಡದ ಮೂರು ಮಹಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗುವ ಸಂಭವವಿದೆ. ಆದರೂ ಬೆಂಕಿ ಇತರ ಪ್ರದೇಶಗಳಿಗೆ ಹರಡದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸುತ್ತಿದ್ದಾರೆ.
ದೆಹಲಿ ಮುನ್ಸಿಪಾಲಿಟಿ ಮತ್ತು ಲೆಫ್ಟಿನೆಂಟ್ ಗವರ್ನರ್ ಈ ವಿಷಯದ ಬಗ್ಗೆ ಗಮನಹರಿಸಿ ಬೆಂಕಿ ಅವಘಡ ಸಂಭವಿಸುವ ಚಾಂದಿನಿ ಚೌಕ್‌ನಂತಹ ಪ್ರದೇಶಗಳಲ್ಲಿ ಅಗ್ನಿಶಾಮಕ ಇಂಜಿನ್‌ಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸಿದ್ಧಪಡಿಸಲಾಗುವುದು ಎಂದು ಹೇಳಿದೆ. ಈ ಭಾಗದಲ್ಲಿ ಬಹುತೇಕ ಹಳೆಯ ಕಟ್ಟಡಗಳು ಇರುವುದರಿಂದ ಅಗ್ನಿ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚು.