ಅಂಧರ ಟಿ20 ವಿಶ್ವಕಪ್ ಫೈನಲ್: ಗೆದ್ದು ಸಂಭ್ರಮಿಸಿದ ಟೀಮ್ ಇಂಡಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 120 ರನ್ ಅಂತರದಲ್ಲಿ ಗೆದ್ದು ಸಂಭ್ರಮಿಸಿದೆ.

ಈ ಮೂಲಕ ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ 2ನೇ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಈ ಹಿಂದೆ 2017ರಲ್ಲಿ ಪ್ರಶಸ್ತಿ ಕೈವಶ ಮಾಡಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಯಾ 2 ವಿಕೆಟ್ ನಷ್ಟಕ್ಕೆ 277 ರನ್ ಸಿಡಿಸಿತು. ಇದನ್ನ ಬೆನ್ನತ್ತಿದ್ದ ಬಾಂಗ್ಲಾ ನಿಗಿದತ 20 ಓವರ್‌ಗಳಲ್ಲಿ ಬಾಂಗ್ಲಾದೇಶ 3 ವಿಕೆಟ್ ಕಳೆದುಕೊಂಡು 157 ರನ್ ಸಿಡಿಸಿತು. ಇದರೊಂದಿಗೆ ಭಾರತ 120 ರನ್ ಭರ್ಜರಿ ಗೆಲುವು ದಾಖಲಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!