ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಅಂಧ ಮಹಿಳೆಯರ ಕ್ರಿಕೆಟ್ ತಂಡ ಚೊಚ್ಚಲ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಹಿನ್ನೆಲೆ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಮಂಗಳವಾರ ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತಿ ಆಟಗಾರರನ್ನು ಅಭಿನಂದಿಸಿ, ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ತಲಾ 10 ಲಕ್ಷ ರೂ ನಗದು ಬಹುಮಾನ ಸೇರಿದಂತೆ ಸರ್ಕಾರಿ ಉದ್ಯೋಗ ಘೋಷಿಸಿದ್ದಾರೆ.
ಅಷ್ಟೇ ಅಲ್ಲದೆ ಭಾರತ ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂ. ನಗದು ಬಹುಮಾನವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಶ್ಲಾಘಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಅಭಿನಂದಿಸಿದ್ದು, ಮುಂದಿನ ಕ್ರೀಡಾ ಬದುಕು ಹೀಗೆಯೇ ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದ್ದಾರೆ.

