Monday, August 8, 2022

Latest Posts

ಕಾರ್ಗಿಲ್ ವಿಜಯೋತ್ಸವ ದಿನ ಪ್ರಯುಕ್ತ ಹುಬ್ಬಳ್ಳಿಯಲ್ಲಿ ರಕ್ತದಾನ ಶಿಬಿರ, ಸೈನಿಕರಿಗೆ ಸನ್ಮಾನ

ಹೊಸದಿಗಂತ ವರದಿ, ಹುಬ್ಬಳ್ಳಿ:
ನಿರಾಮಯ ಫೌಂಡೇಶನ್ ವತಿಯಿಂದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ ಹಾಗೂ ಅಮೃತ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ವಿನಾಯಕ ದಾಮೋದರ ಸಾವರ್ಕರ್ ಮೊಮ್ಮಗ ಸಾತ್ಯಕಿ‌ ಸಾವರ್ಕರ ಅವರು ಉದ್ಘಾಟಿಸಿದರು.
ಈ ಕಾರ್ಯಕ್ರಮದ ಭಾಗವಾಗಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸೈನಿಕರಿಗೆ ಸನ್ಮಾನಿಸಲಾಯಿತು. ಗದಗನ ಬೃಹನ್ಮಠದ ಸದಾಶಿವಾನಂದ ಸ್ವಾಮೀಜಿ, ಆರ್ ಎಸ್ ಎಸ್ ಪ್ರಜ್ಞಾ ಪ್ರವಾಹದ ರಘುನಂದನ, ಡಾ.ಮಲ್ಲಿಕಾರ್ಜುನ ಬಾಳಿಕಾಯಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss