Monday, September 26, 2022

Latest Posts

ವಿಜಯಪುರದಲ್ಲಿ ಸೆ.17 ರಂದು ಪ್ರಧಾನಿ ಮೋದಿ ಜನ್ಮದಿನ ನಿಮಿತ್ತ ರಕ್ತದಾನ ಶಿಬಿರ

ಹೊಸದಿಗಂತ ವರದಿ ವಿಜಯಪುರ:
ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆಯಲ್ಲಿ ಸೆ. 17 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುವವರು ಆನ್ ಲೈನ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದರು.

ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿಠ್ಠಲ ಯತ್ನಟ್ಟಿ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂತು ಶಿಂಧೆ, ಅಶೋಕ ರಾಠೋಡ, ರಾಜೇಶ ತಾವಸೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಮಾಧ್ಯಮ ಪ್ರಮುಖ ವಿಜಯ ಜೋಶಿ, ಶ್ರೀಧರ ಬಿಜ್ಜರಗಿ, ಆರ್.ಎಚ್. ಚವ್ಹಾಣ ಸುದ್ದಿಗೋಷ್ಠಿಯಲ್ಲಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!