ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ಸ್ಯಾಂಡಲ್ ವುಡ್ ನಟ ಶ್ರೀಮುರಳಿ ಖಂಡಿಸಿದ್ದು, ಅಮಾಯಕರ ಜೀವ ತೆಗೆದ ಉಗ್ರರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು ಎಂದು ಹೇಳಿದ್ದಾರೆ.
ಪಹಲ್ಗಾಮ್ ದಾಳಿಯಲ್ಲಿ ಜೀವ ಕಳೆದುಕೊಂಡವರ ಬಗ್ಗೆ ನೋವಾಗ್ತಿದೆ. ಇದನ್ನೆಲ್ಲಾ ಯಾರು ಮಾಡಿದ್ದಾರೋ ಅವರನ್ನು ಹುಡ್ಕೊಂಡು ಹೋಗಿ ಹೊಡೆಯಬೇಕು. ಅಲ್ಲಿ ಸಮಾಧಾನವಿಲ್ಲ. ಈ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ. ಒಬ್ಬ ನಾಗರೀಕನಾಗಿ ಹೇಳಬೇಕು ಅಂದರೆ ಉಗ್ರರ ದಾಳಿ ವಿಷ್ಯ ಕೇಳಿ ಮೈಯಲ್ಲಿ ರಕ್ತ ಕುದಿಯುತ್ತಿದೆ. ಅವರ ಸಂಹಾರ ಆಗೋವರೆಗೂ ನಮಗೆ ನೆಮ್ಮದಿಯಿಲ್ಲ ಎಂದು ಕಿಡಿಕಾರಿದರು.
ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಬಲಿಯಾಗಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ.