ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ಯಾರು ಪಿರಿಯಡ್ಸ್ ಆಗಿದ್ದಾರೆ ಎಂದು ತಿಳಿಯಲು ಮುಖ್ಯ ಶಿಕ್ಷಕರು ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯರು ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆಯಲ್ಲಿ ಐದರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು. ಶಿಕ್ಷಕರು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಯಾರು ಮುಟ್ಟಾಗಿದ್ದಾರೆಂದು ತಿಳಿದುಕೊಳ್ಳಲು ಪ್ರಯತ್ನಿಸಿದ್ದು, ಪೋಷಕರಲ್ಲಿ ಆಕ್ರೋಶವನ್ನುಂಟುಮಾಡಿದೆ.
ಮಂಗಳವಾರ ಘಟನೆ ನಡೆದಿದೆ, ಪ್ರಾಂಶುಪಾಲರು 5 ರಿಂದ 10 ನೇ ತರಗತಿಯ ಹಲವಾರು ವಿದ್ಯಾರ್ಥಿನಿಯರನ್ನು ಶಾಲಾ ಸಭಾಂಗಣಕ್ಕೆ ಕರೆದು ಸ್ನಾನಗೃಹದ ನೆಲದ ಮೇಲೆ ಕಂಡುಬಂದ ರಕ್ತದ ಕಲೆ ಕಂಡುಬಂದಿರುವ ಕುರಿತು ಪ್ರಶ್ನೆಗಳನ್ನು ಕೇಳಿದ್ದರು ಎಂದು ಸಿಬ್ಬಂದಿ ಹೇಳಿದ್ದಾರೆ. ನಂತರ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಮುಟ್ಟಾದವರು ಹಾಗೂ ಮುಟ್ಟಾಗದವರು ಹೀಗೆ ಎರಡು ಗುಂಪುಗಳಾಗಿ ವಿಂಗಡಿಸಲು ಹೇಳಿದ್ದರು.
ಆ ಶಾಲೆಯಲ್ಲಿ ಐದರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು. ಶಿಕ್ಷಕರು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಯಾರು ಮುಟ್ಟಾಗಿದ್ದಾರೆಂದು ತಿಳಿದುಕೊಳ್ಳಲು ಪ್ರಯತ್ನಿಸಿದ್ದು, ಪೋಷಕರಲ್ಲಿ ಆಕ್ರೋಶವನ್ನುಂಟುಮಾಡಿದೆ.