October 11, 2026
Sunday, October 11, 2026
spot_img

ಹಾಸ್ಟೆಲ್ ನಲ್ಲಿ ಹರಿಯಿತು ರಕ್ತದೋಕುಳಿ! ಅಪರಿಚಿತನಿಂದ ದಾಳಿ: ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿ ಹಲವರು ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಷ್ಕಿರ್ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯ ವಿದೇಶಿ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಭೀಕರ ಚಾಕು ದಾಳಿ ನಡೆದಿದ್ದು, ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡ ಘಟನೆ ರಷ್ಯಾದ ಬಾಷ್ಕೋರ್ಟೊಸ್ತಾನ್ ಗಣರಾಜ್ಯದ ಉಫಾ ನಗರದಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, 15 ವರ್ಷದ ಬಾಲಕನೊಬ್ಬ ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಬಂಧಿಸಲು ಪ್ರಯತ್ನಿಸಿದ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಒಟ್ಟು ಆರು ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

ದಾಳಿಕೋರನು ಬಂಧನದ ಸಮಯದಲ್ಲಿ ತನ್ನ ಮೇಲೆಯೇ ಗಾಯ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಉದ್ದೇಶದ ಬಗ್ಗೆ ರಷ್ಯಾದ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.

ಈ ಘಟನೆ ಬಗ್ಗೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯಿಸಿದ್ದು, ಗಾಯಾಳು ವಿದ್ಯಾರ್ಥಿಗಳಿಗೆ ಅಗತ್ಯ ಸಹಾಯ ನೀಡಲಾಗುತ್ತಿದೆ ಎಂದು ತಿಳಿಸಿದೆ.

Must Read