September 16, 2026
Wednesday, September 16, 2026
spot_img

ಸೂಪರ್‌ಮಾರ್ಕೆಟ್‌ನಲ್ಲಿ ರಕ್ತಪಾತ: ಕೀವ್‌ನಲ್ಲಿ ದುಷ್ಕರ್ಮಿಯ ಗುಂಡಿಗೆ 6 ಮಂದಿ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್ ರಾಜಧಾನಿ ಕೀವ್‌ನ ಸೂಪರ್‌ಮಾರ್ಕೆಟ್ ಒಂದರಲ್ಲಿ ಅಪರಿಚಿತ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ಆರು ಮಂದಿ ಬಲಿಯಾಗಿದ್ದಾರೆ. ನಗರದ ವಸತಿ ಪ್ರದೇಶವಾದ ಹೊಲೊಸಿವ್ಸ್ಕಿ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ.

ದಾಳಿಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಉಕ್ರೇನ್ ವಿಶೇಷ ಪಡೆಗಳು ಕಾರ್ಯಾಚರಣೆ ನಡೆಸಿ ದಾಳಿಕೋರನನ್ನು ಹೊಡೆದುರುಳಿಸಿವೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, “ನಾಗರಿಕರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಯನ್ನು ಹತ್ಯೆ ಮಾಡಲಾಗಿದೆ. ಈ ಘಟನೆ ಅತ್ಯಂತ ದುರದೃಷ್ಟಕರ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ದಾಳಿಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !