ಮಂಡ್ಯದಲ್ಲಿ ಹರಿದ ರಕ್ತದೋಕುಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ನಗರದ ಸ್ವರ್ಣ ಸಂದ್ರದಲ್ಲಿ ರೌಡಿಶೀಟ‌ರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಕ್ಷಯ್ (24) ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಕ್ಷಯ್ ವಿರುದ್ಧ ತನಿಖೆ ಆರಂಭಿಸಲಾಗಿದೆ. ಹಳೆ ದ್ವೇಷದಿಂದ ದುಷ್ಕರ್ಮಿಗಳು ರೌಡಿಯನ್ನು ಬರ್ಬರವಾಗಿ ಕೊಂದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!