RECRUITMENT | ಬಿಎಂಆರ್‌ಸಿಎಲ್‌ ನಲ್ಲಿ 68 ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ 68 ಡೆಪ್ಯುಟಿ ಚೀಫ್‌ ಇಂಜಿನಿಯರ್‌, ಎಕ್ಸಿಕ್ಯುಟಿವ್‌ ಇಂಜಿನಿಯರ್‌, ಅಸಿಸ್ಟೆಂಟ್‌ ಎಕ್ಸಿಕ್ಯುಟಿವ್‌ ಇಂಜಿನಿಯರ್‌ ಮತ್ತು ಅಸಿಸ್ಟೆಂಟ್‌ ಇಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ, ಬಿ.ಇ/ಬಿ.ಟೆಕ್‌, ಬಿ.ಎಸ್ಸಿ, ಬಿಸಿಎ, ಎಂಎಸ್ಸಿ ವಿದ್ಯಾರ್ಹತೆ ಜೊತೆಗೆ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 50,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್‌ 17,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!