JOB| ಬಿಎಂಆರ್‌ಸಿಎಲ್‌ ನಲ್ಲಿ 96 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ 96 ಸ್ಟೇಷನ್​ ಕಂಟ್ರೋಲರ್ /ಟ್ರೈನ್​ ಆಪರೇಟರ್​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಮೇ 16,2023ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/- ರಿಂದ 82,660/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್‌ ಅರ್ಜಿಯ ಪ್ರತಿಯನ್ನು ಕಚೇರಿ ವಿಳಾಸಕ್ಕೆ ಜೂನ್‌ 7,2023ರೊಳಗೆ ತಲುಪಿಸಬೇಕಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!