JOB| ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ಉದ್ಯೋಗಾವಕಾಶ, ತಿಂಗಳಿಗೆ 3 ಲಕ್ಷ ವೇತನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ನಿರ್ದೇಶಕ (ಆಪರೇಷನ್ಸ್ & ಮೆಂಟೇನನ್ಸ್) ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಇಂಜಿನಿಯರಿಂಗ್‌ ಪದವಿ ವಿದ್ಯಾರ್ಹತೆ ಜೊತೆಗೆ ಜುಲೈ 14,2023ರ ಅನ್ವಯ ಕನಿಷ್ಟ 50 ರಿಂದ ಗರಿಷ್ಟ 57 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಿರ್ದೇಶಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 3 ಲಕ್ಷ ವೇತನ ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್‌ 12,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!