ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿ ಬಸ್ ಅಪಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಯಶವಂತಪುರ ಬಳಿಯ ಗಾರೆಪ್ಪನ ಪಾಳ್ಯ ರಸ್ತೆಯಲ್ಲಿರುವ ಹೂವಿನ ಮಾರ್ಕೆಟ್ ಬಳಿ ಈ ದುರಂತ ಸಂಭವಿಸಿದೆ.
ಗಂಗಾಧರ್ (21) ಬಿಎಂಟಿಸಿ ಬಸ್ ಅಪಘಾತಕ್ಕೆ ಬಲಿಯಾದ ಇಂಜಿನಿಯರಿಂಗ್ ವಿದ್ಯಾರ್ಥಿ
ಇಂಟರ್ನ್‌ಶಿಪ್ ಸರ್ಟಿಫಿಕೇಟ್ ತರಲು ವಿದ್ಯಾರ್ಥಿ ಗಂಗಾಧರ್ ಬೈಕ್ ನಲ್ಲಿ ಹೆಚ್‌ಎಎಲ್ ಗೆ ತೆರಳುತ್ತಿದ್ದ ಎಂದು ತಿಳಿದುಬಂದಿದೆ. ಈ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿದೆ. ಅದರ ಪರಿಣಾಮ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಗಂಗಾಧರ್ ಮೇಲೆ ಬಸ್ಸಿನ ಚಕ್ರ ಹರಿದು ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಅಪಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಕಳೆದ ಹತ್ತು ದಿನಗಳಲ್ಲಿ ಬಿಎಂಟಿಸಿ ಸಂಬಂಧಿತ ಅಪಘಾತಗಳಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.