ಬಿಎಂಟಿಸಿ ಬಸ್ ಅಪಘಾತಕ್ಕೆ ಮತ್ತೊಂದು ಬಲಿ: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಎಂಟಿಸಿ ಬಸ್‌ ಅಪಘಾತಕ್ಕೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನೆಲಮಂಗಲ ಟೌನ್‌ ಬಿನ್ನಮಂಗಲದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಮಧು (32) ಬಿಎಂಟಿಸಿ ಬಸ್‌ ಅಪಘಾತಕ್ಕೆ ಬಲಿಯಾದ ಬೈಕ್‌ ಸವಾರ.

ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದ್ದು, ಗುದ್ದಿದ ರಭಸಕ್ಕೆ ಬೈಕ್ ಸವಾರ ನೆಲದ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಬಿಎಂಟಿಸಿ ಬಸ್‌ ಅಪಘಾತಕ್ಕೆ ಬಲಿಯಾಗಿದ್ದ. ಇದೀಗ ಅಂತಹುದೇ ಮತ್ತೊಂದು ಘಟನೆ ಮರುಕಳಿಸಿರುವುದರಿಂದ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!