ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್.ಮಾರುಕಟ್ಟೆ, ಬಳಿ ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ ಗೆ ಬೈಕ್ ವೊಂದು ಡಿಕ್ಕಿಹೊಡೆದು ಬಸ್ ಕೆಳಗೆ ಸಿಲುಕಿದೆ. ಇದೇ ವೇಳೆ ಬಂದ ಮತ್ತೊಂದು ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.