May 17, 2026
Sunday, May 17, 2026
spot_img

ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ: ಚಕ್ರದ ಅಡಿ ಸಿಲುಕಿ ಯುವತಿ ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಸಿರಿಶಾ ಅವರು ತಮ್ಮ ಸ್ಕೂಟರ್‌ನಲ್ಲಿ ಉತ್ತರಹಳ್ಳಿ ಮುಖ್ಯ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದಾಗ, ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಿರಿಶಾ ಅವರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ದುರಾದೃಷ್ಟವಶಾತ್, ಚಲಿಸುತ್ತಿದ್ದ ಬಸ್‌ನ ಹಿಂಬದಿಯ ಚಕ್ರ ಆಕೆಯ ತಲೆಯ ಮೇಲೆ ಹರಿದಿದ್ದರಿಂದ, ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ನಂತರ ಸ್ಥಳಕ್ಕೆ ಧಾವಿಸಿದ ಕೆಂಗೇರಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್‌ಆರ್ ನಗರದ ಮೆಡಿಕಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕ ಚಂದ್ರು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !