ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿ ಬಸ್ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೇವನಹಳ್ಳಿ ಪಟ್ಟಣದ ಹಳೆಯ ಬಸ್ ನಿಲ್ದಾಣದ ಡಿಪೋ ಮ್ಯಾನೇಜರ್ ಕೊಠಡಿ ಮುಂದೆಯೇ ಸೋಮವಾರ ರಾತ್ರಿ ಬಿಎಂಟಿಸಿ ಚಾಲಕ ಕಂ ನಿರ್ವಾಹಕ ನಾಗೇಶ್ (45) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ನಾಗೇಶ್ ಆವತಿ ಗ್ರಾಮದ ನಿವಾಸಿ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಚಾಲಕನ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಪೊಲೀಸರ ತನಿಖೆಯ ಬಳಿಕವೇ ನಿಖರ ಮಾಹಿತಿ ಹೊರಬೀಳಲಿದೆ.