February 15, 2026
Sunday, February 15, 2026
spot_img

ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್: ಓರ್ವ ಸಾ*ವು, ಮತ್ತೊಬ್ಬನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್, ಮುಂಭಾಗದಲ್ಲಿದ್ದ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಲ್ಲಿ ಒಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಬೈಕ್ ಮೇಲಿದ್ದ ಮತ್ತೊಬ್ಬ ಸವಾರನ ಸ್ಥಿತಿ ಅತ್ಯಂತ ಗಂಭೀರವಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಹೆದ್ದಾರಿ ಗಸ್ತು ಸಿಬ್ಬಂದಿ ನೆರವಿಗೆ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸವಾರನನ್ನು NHAI ಅಂಬುಲೆನ್ಸ್ ಮೂಲಕ ತುರ್ತು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !