ಚಿಕ್ಕಬಳ್ಳಾಪುರಕ್ಕೆ ಇಂದಿನಿಂದ ಬಿಎಂಟಿಸಿ ಬಸ್​ ಸಂಚಾರ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ ವೋಲ್ವೋ ಎರಡು ಹವಾನಿಯಂತ್ರಿತ ಬಸ್​ಗಳು ಸಂಚಾರ ಆರಂಭಿಸಲಿವೆ. ಬಹುದಿನಗಳ ಕನಸು ನನಸಾಗಿದ್ದು, ಚಿಕ್ಕಬಳ್ಳಾಪುರದ ಜನರಲ್ಲಿ ಸಂತಸ ಮನೆ ಮಾಡಿದೆ.

ಮಾ.17 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಅವರು ಬಿಎಂಟಿಸಿ ಸಂಚಾರಕ್ಕೆ ಒಪ್ಪಿಗೆ ಸೂಚಿಸಿದ್ದರು.

ಈ ಹಿನ್ನಲೆ ಇಂದಿನಿಂದ ಬಿಎಂಟಿಸಿ ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ನಿಂದ ಹೆಬ್ಬಾಳ, ಯಲಹಂಕ ಮತ್ತು ರಾಣಿ ಸರ್ಕಲ್/ದೇವನಹಳ್ಳಿ ಮೂಲಕ ಚಿಕ್ಕಬಳ್ಳಾಪುರಕ್ಕೆ ಹವಾನಿಯಂತ್ರಿತ ವೋಲ್ವೋ ಬಸ್‌ಗಳು ಸಂಚರಿಸಲಿವೆ. ಪ್ರತಿ ಬಸ್ ದಿನಕ್ಕೆ ಮೂರು ಟ್ರಿಪ್ ಮಾಡುತ್ತವೆ.

ಚಿಕ್ಕಬಳ್ಳಾಪುರ ಬಸ್ ನಿಲ್ದಾಣದಿಂದ ಬಸ್​ ಹೊರಡುವ ಸಮಯ :

ಬೆಳಿಗ್ಗೆ 8.10, 8.20, ಮಧ್ಯಾಹ್ನ 12.35, 1.05, ಸಂಜೆ 7.15, 7.35 ಕ್ಕೆ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೊರಡಲಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಬಸ್​ ಹೊರಡುವ ಸಮಯ :

ಬೆಳಿಗ್ಗೆ 10.25, 11.00, ಸಂಜೆ 5.30, 5.45, ರಾತ್ರಿ 9.15, 9. 35 ಕ್ಕೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸಂಚರಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!