October 21, 2026
Wednesday, October 21, 2026
spot_img

ಜವರಾಯನಾಗಿ ಬಂದ ಬಿಎಂಟಿಸಿ: ಒಂದೇ ಕುಟುಂಬದ ಮೂವರ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ದಂಪತಿ ಹಾಗೂ ಅವರ ಎರಡು ವರ್ಷದ ಪುತ್ರಿ ಸಾವನ್ನಪ್ಪಿದ್ದಾರೆ.

ಮೃತರನ್ನು ಅರುಣ್ (35), ಅನುಷಾ (32) ಮತ್ತು ಹರ್ನಾ (2) ಎಂದು ಗುರುತಿಸಲಾಗಿದೆ. ದಂಪತಿಯ ಮತ್ತೊಬ್ಬ ಪುತ್ರಿ ಅನುಶಿಕಾ (5) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

ತೆಲ್ಲಹಳ್ಳಿ ಗ್ರಾಮದ ನಿವಾಸಿಗಳಾದ ಕುಟುಂಬದವರು ದೇವನಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸೂಲಿಬೆಲೆ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ತಪ್ಪು ಮಾರ್ಗದಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Must Read