ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಯಶವಂತಪುರ ಬಳಿ ನಡೆದಿದೆ.
ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ (39) ಮೃತಪಟ್ಟ ಡ್ರೈವರ್. ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿದ್ದಾರೆ.
ಈ ವೇಳೆ ಬಿಎಂಟಿಸಿ ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ.
ನೆಲಮಂಗಲ ಕಡೆಯಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಅನ್ನು ಚಾಲನೆ ಮಾಡಿಕೊಂಡು ಬರುವಾಗ ಡ್ರೈವರ್ಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಬಸ್ ನಿಲ್ಲಿಸಿದ್ದನು. ಎದೆನೋವು ತೀವ್ರವಾಗಿ ಕಾಣಿಸಿಕೊಂಡು ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿದ್ದಾನೆ.
ಬಸ್ನಲ್ಲಿದ್ದ ಪ್ರಯಾಣಿಕರಿಗರಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನಲಾಗಿದೆ.