Saturday, December 20, 2025

ಮಹಿಳೆ ಮೇಲೆ ಕೈ ಮಾಡಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಕೆಲಸದಿಂದ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಕೈ ಮಾಡಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡ್ರೈವರ್ ಅನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಬೆಂಗಳೂರಲ್ಲಿ ಕೆಎ 51, ಎಕೆ 4276 ಸಂಖ್ಯೆಯ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನೊಬ್ಬ ಮಹಿಳೆಯ ಮೇಲೆ ಕೈ ಮಾಡಿದ್ದರು. ಸೆಪ್ಟೆಂಬರ್.8ರಂದು ಪೀಣ್ಯದಿಂದ ಬಾಣಾವರಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಗಲಾಟೆ ನಡೆದಾಗ ಈ ಘಟನೆ ಸಂಭವಿಸಿತ್ತು.

ಈ ಗಲಾಟೆಯ ಸಂದರ್ಭಮಹಿಳಾ ಪ್ರಯಾಣಿಕರು ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು. ಆ ಬಳಿಕ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕ ಕೂಡ ಕೈ ಮಾಡಿದ್ದನು. ಹೀಗೆ ಹಲ್ಲೆ ಮಾಡಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನನ್ನು ಕೆಲಸದಿಂದ ತಾತ್ಕಾಲಿಕವಾಗಿ ವಜಾ ಮಾಡಿ ಬಿಎಂಟಿಸಿ ಆದೇಶಿಸಿದೆ.

error: Content is protected !!