Thursday, October 6, 2022

Latest Posts

ಅಂತಿಮ ವರ್ಷದ ವಿದ್ಯಾರ್ಥಿಗಳ ಬಸ್ ಪಾಸ್‌ ವಿಸ್ತರಿಸಿದ ಬಿಎಂಟಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಂತಿಮ ವರ್ಷದ ವಿದ್ಯಾರ್ಥಿ ಪಾಸ್‌ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಕೋವಿಡ್‌-19 ಸಾಂಕ್ರಾಮಿಕದ ಕಾರಣ 2021-22 ನೇ ಸಾಲಿನ ಕಾಲೇಜಿನ ತರಗತಿಗಳು ತಡವಾಗಿ ಪ್ರಾರಂಭವಾಗಿದೆ. ಅಂತಿಮ ಸೆಮಿಸ್ಟರ್‌ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳು ಸೆಪ್ಟೆಂಬರ್‌-2022 ಮತ್ತು ಅಕ್ಟೋಬರ್‌ – 2022ರ ತಿಂಗಳಲ್ಲಿ ನಡೆಯಲಿದೆ.

ಈ ಸಲುವಾಗಿ, ಸದರಿ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯುವವರೆಗೂ ಸಂಸ್ಥೆಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಸಲುವಾಗಿ, 2021-22 ನೇ ಸಾಲಿನ ವಿದ್ಯಾರ್ಥಿ ಬಸ್‌ ಪಾಸಿನೊಂದಿಗೆ ಅಂತಿಮ ವರ್ಷದ/ಸೆಮಿಸ್ಟರ್‌ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈಧ್ಯಕೀಯ ವಿದ್ಯಾರ್ಥಿಗಳು ದಿನಾಂಕ ಅಕ್ಟೋಬರ್‌ 31ರವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!