Monday, September 25, 2023

Latest Posts

ಬೆಂಗಳೂರು ಬಂದ್ ಗೆ ಬಿಎಂಟಿಸಿ ಠಕ್ಕರ್: ನಾಳೆ ಓಡಾಡಲಿದೆ 500 ಹೆಚ್ಚುವರಿ ಬಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖಾಸಗಿ ಸಾರಿಗೆಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.

ಸೋಮವಾರ ಸರಕು ಸಾಗಣೆ ವಾಹನ, ಶಾಲಾ ವಾಹನ, ಟ್ಯಾಕ್ಸಿ, ಖಾಸಗಿ ಬಸ್, ಓಲಾ, ಉಬರ್, ಆಟೋ ರಸ್ತೆಗಿಳಿಯುವುದಿಲ್ಲವೆಂದು ಹೇಳಲಾಗಿದ್ದು, ಪ್ರಯಾಣಿಕರಿಗೆ ತೊಂದರೆಯಾಗಲಿದೆ.ಈ ಹಿನ್ನೆಲೆ ಬಿಎಂಟಿಸಿ 500 ಹೆಚ್ಚುವರಿ ಬಸ್ ಗಳನ್ನು ಬಿಡಲಿದೆ.

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ನಮ್ಮ ಮೆಟ್ರೋ ಸಂಪರ್ಕವಿದ್ದು, ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ಬಂದ್ ಕರೆ ಹಿನ್ನಲೆಯಲ್ಲಿ ಬಿಎಂಟಿಸಿ 500 ಹೆಚ್ಚುವರಿ ಬಸ್ ಓಡಿಸಲು ತೀರ್ಮಾನಿಸಿದೆ. ಮುಂಜಾನೆ 5 ರಿಂದ ರಾತ್ರಿ 10 ಗಂಟೆಯ ತನಕ ಹೆಚ್ಚವರಿ ಬಸ್ ಗಳು ನಗರದ ವಿವಿಧ ಮಾರ್ಗದಲ್ಲಿ ಸಂಚಾರ ನಡೆಸಲಿವೆ.

ಶಕ್ತಿ ಯೋಜನೆ ಹಿನ್ನೆಲೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಂದ್ ನಡೆಸಲಿದೆ. ಬೆಂಗಳೂರು ಬಂದ್ ಗೆ ಖಾಸಗಿ ಶಾಲಾ ಬಸ್ ಗಳ ಚಾಲಕರು ಕೂಡ ಬೆಂಬಲ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!