ಹೊಸದಿಗಂತ ಡಿಜಿಟಲ್ ಡೆಸ್ಕ್:
9ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಸಿದೆ.
ಕಲಿಕಾ ದೃಷ್ಟಿಯಿಂದ ಒಂಬತ್ತನೇ ತರಗತಿ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುತ್ತದೆ. 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತದೆ.
ಸಾಕಷ್ಟು ವಿರೋಧ ನಡುವೆಯೂ ಬೋರ್ಡ್ ಪರೀಕ್ಷೆ ನಡೆಸಲು ಇಲಾಖೆ ನಿರ್ಧರಿಸಿದೆ. ಪ್ರಥಮ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಅದೇ ಕಾಲೇಜಿನಲ್ಲಿ ನಡೆಯಲಿದೆ, ಮೇಲ್ವಿಚಾರಕರೂ ಇರಲಿದ್ದಾರೆ.
ಪ್ರಶ್ನೆಪತ್ರಿಕೆಯೂ ಬೋರ್ಡ್‌ನಿಂದಲೇ ಆಗಮಿಸುತ್ತದೆ. ಈ ಪರೀಕ್ಷೆಯಲ್ಲಿ ಫೇಲ್ ಆದರೆ ಮತ್ತೊಂದು ಪೂರಕ ಪರೀಕ್ಷೆ ನಡೆಸಲಾಗುತ್ತದೆ.