5,8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ (Board Exam) ನಡೆಸಲು ಹೈಕೋರ್ಟ್‍ನ (High Court) ವಿಭಾಗೀಯ ಪೀಠ ನೀಡಿದ್ದ ಅನುಮತಿ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ (School) ಸಂಘ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ.

ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ಸಂಘದ ಪರ ವಕೀಲರು ಮನವಿ ಮಾಡಿದ್ದಾರೆ.

ಸೋಮವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಪ್ರಸ್ತಾಪಿಸಿದ ವಕೀಲರು, ರಾಜ್ಯಮಟ್ಟದ ‘ಬೋರ್ಡ್ ಪರೀಕ್ಷೆ’ಗಳನ್ನು ನಡೆಸುವುದರಿಂದ ಮೌಲ್ಯಮಾಪನ ವಿಧಾನವು ವಿದ್ಯಾರ್ಥಿಗಳು (Student) ಮತ್ತು ಶಿಕ್ಷಕರ (Teacher) ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರವು ಪೋಷಕರ ಮತ್ತು ಶಾಲೆಗಳ ಜೊತೆಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ವಾದಿಸಿದರು.

ಸಿಜೆಐ ಡಿ.ವೈ ಚಂದ್ರಚೂಡ್ ಮಾ. 27ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.

ಈ ವೇಳೆ ಕೀಲರು ಮಾ. 27ರಂದು ಪರೀಕ್ಷೆಗಳು ಆರಂಭವಾಗಲಿದೆ. ಹೀಗಾಗಿ ಇದಕ್ಕೂ ಮುನ್ನ ವಿಚಾರಣೆ ನಡೆಸಬೇಕು ಎಂದು ಹೇಳಿದರು. ಇದಕ್ಕೆ ಸಿಜೆಐ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮ ಎಂದು ಹೈಕೋರ್ಟ್‍ಗೆ ಗೊತ್ತಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!