ಟಿಕೆಟ್ ಇದ್ದರೂ ಬೋರ್ಡಿಂಗ್ ನಿರಾಕರಿಸಿದ ಏರ್ ಇಂಡಿಯಾ: ಡಿಜಿಸಿಎಯಿಂದ ಬಿತ್ತು 10 ಲಕ್ಷ ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದ ಮತ್ತು ಅದಕ್ಕೆ ಪರಿಹಾರ ನೀಡದೇ ಇರುವ ಕಾರಣ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) 10 ಲಕ್ಷ ದಂಡ ವಿಧಿಸಿದೆ.
ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವ ಕೆಲವು ನಿರ್ದಿಷ್ಟ ನಿದರ್ಶನಗಳು ಕಂಡುಬಂದಿವೆ. ಈ ಕುರಿತು ಶೋಕಾಸ್ ನೋಟಿಸ್ ನೀಡಲಾಗಿತ್ತು. ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿ ಏರ್‌ ಇಂಡಿಯಾ ಪರಿಹಾರ ನೀಡಿಲ್ಲವಾದರೂ, ನಿರ್ದಿಷ್ಟ ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಿ ವಿವರಣೆ ಕೋರಲಾಗಿದೆ. ಏರ್ ಇಂಡಿಯಾ ನೀಡಿರುವ ವಿವರಣೆಯನ್ನು ಪರಿಶೀಲಿಸಿ 10 ಲಕ್ಷ ದಂಡ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಈ ಹಿಂದೆ ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್‌ಲೈನ್ಸ್‌ಗೆ ಡಿಜಿಸಿಎ 5 ಲಕ್ಷ ದಂಡ ವಿಧಿಸಿತ್ತು. ಈ ಘಟನೆ ಸಹ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!