ಅವುಕು ಜಲಾಶಯದಲ್ಲಿ ದೋಣಿ ಮಗುಚಿ ಒಬ್ಬ ಸಾವು, ಇಬ್ಬರು ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದಿರುವ ಘಟನೆ ನಂದ್ಯಾಲ ಜಿಲ್ಲೆಯ ಅವುಕು ಜಲಾಶಯದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ 11 ಮಂದಿ ನಾಪತ್ತೆಯಾಗಿದ್ದಾರೆ. ತಕ್ಷಣ ಸ್ಥಳೀಯರು ಎಚ್ಚೆತ್ತು ಎಂಟು ಮಂದಿಯನ್ನು ರಕ್ಷಿಸಿದ್ದಾರೆ. ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಮಾಹಿತಿ ಪಡೆದ ಪೊಲೀಸರು ಮತ್ತು ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಈಜುಗಾರರ ಸಹಾಯದಿಂದ ಶೋಧ ಕಾರ್ಯ ಆರಂಭಿಸಿದರು. ಆದರೆ, ಈ ಹುಡುಕಾಟದ ವೇಳೆ ಈಜುಗಾರರಿಗೆ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ದೋಣಿಯಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಕಾನ್ ಸ್ಟೇಬಲ್ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಭಾನುವಾರ ರಜೆ ಇದ್ದ ಕಾರಣ ಸ್ಪೆಷಲ್ ಬ್ರಾಂಚ್ ಕಾನ್ ಸ್ಟೇಬಲ್ ರಸೂಲ್ ಕುಟುಂಬ ಕೋವೆಲಕುಂಟ್ಲಾ ಪೊಲೀಸ್ ಠಾಣೆಗೆ ಪಿಕ್ ನಿಕ್ ಗೆ ತೆರಳಿತ್ತು. ಅವಘಡ ಸಂಭವಿಸಿದಾಗ ಅವರೆಲ್ಲರೂ ಬೋಟ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಭಾನುವಾರವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಲಾಶಯಕ್ಕೆ ಆಗಮಿಸಿದ್ದರು. ಎರಡು ವರ್ಷಗಳ ಹಿಂದೆಯೇ ಈ ಜಲಾಶಯದಲ್ಲಿ ಬೋಟಿಂಗ್ ಆರಂಭಿಸಲಾಗಿತ್ತು. ಈ ಹಿಂದೆ ಇಂತಹ ಅವಘಡಗಳು ನಡೆದಿರುವ ದಾಖಲೆಗಳು ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!