SHOCKING NEWS | ನದಿಯಲ್ಲಿ ಮುಳುಗಿದ ದೋಣಿ: 20 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಯಮುನಾ ನದಿಯಲ್ಲಿ ದೋಣಿ ಮುಳುಗಿ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ದೋಣಿ ಫತೇಪುರಕ್ಕೆ ತೆರಳುತ್ತಿದ್ದು, ಈ ವೇಳೆ ಮುಳುಗಡೆಯಾಗಿದೆ. ಈ ವೇಳೆ 30ಕ್ಕೂ ಹೆಚ್ಚು ಜನರಿದ್ದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಇನ್ನು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ, ಡಿಐಜಿ, ಎನ್ಡಿಆರ್‌ಎಫ್‌ ಮತ್ತು ಎಸ್ಡಿಆರ್‌ಎಫ್‌ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!