ಗುಜರಾತ್ ಕರಾವಳಿಯಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಬೋಟ್ ವಶ: ಆರು ಪಾಕ್ ಸಿಬ್ಬಂದಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ಕರಾವಳಿಯಲ್ಲಿ 60 ಪ್ಯಾಕೆಟ್ ಡ್ರಗ್ಸ್ ಸಾಗಿಸುತ್ತಿದ್ದ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ ಜೊತೆಗೆ ಆರು ಪಾಕಿಸ್ತಾನಿ ಸಿಬ್ಬಂದಿಯನ್ನು ಮಂಗಳವಾರ ಬಂಧಿಸಲಾಗಿದೆ .

ಭಾರತೀಯ ಕೋಸ್ಟ್ ಗಾರ್ಡ್, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಅರಬ್ಬಿ ಸಮುದ್ರದಲ್ಲಿ ಅಂತರರಾಷ್ಟ್ರೀಯ ಕಡಲ ಗಡಿ ರೇಖೆ(ಐಎಂಬಿಎಲ್) ಬಳಿ ಜಂಟಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಸಾಗಿಸುತ್ತಿದ್ದ ದೋಣಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಎಟಿಎಸ್ ಎಸ್ ಪಿ ಸುನಿಲ್ ಜೋಶಿ ಹೇಳಿದ್ದಾರೆ.

ಪೋರಬಂದರ್ ಕರಾವಳಿಯಿಂದ ಸುಮಾರು 180 ನಾಟಿಕಲ್ ಮೈಲು ದೂರದಲ್ಲಿ ಸುಮಾರು 60 ಪ್ಯಾಕೆಟ್ ಡ್ರಗ್ಸ್ ಸಾಗಿಸುತ್ತಿದ್ದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ. ಆರು ಪಾಕಿಸ್ತಾನಿ ಸಿಬ್ಬಂದಿಗಳೊಂದಿಗೆ ದೋಣಿಯನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!