ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಸಮೀಪ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿ ಬಿದ್ದಿದ್ದು, ಹಲವು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಘಟನೆ ಬಳಿಕ ಸ್ಥಳೀಯ ಆಡಳಿತ ಬೃಹತ್ ಮಟ್ಟದ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ.
32 ಭಾರತೀಯರು, ನಾಲ್ವರು ಸಿಬ್ಬಂದಿ
ಸ್ಥಳೀಯ ವರದಿಗಳ ಪ್ರಕಾರ, ದೋಣಿಯಲ್ಲಿ 32 ಭಾರತೀಯ ಪ್ರವಾಸಿಗರು ಹಾಗೂ ನಾಲ್ವರು ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ದೋಣಿ ಹೊನ್ ಮೇ ರುಟ್ ನ್ಗೋಯ್‌ನಿಂದ ಆನ್ ಥೋಯ್ ಬಂದರಿಗೆ ತೆರಳುತ್ತಿದ್ದ ವೇಳೆ ಸಮುದ್ರದಲ್ಲಿ ಮಗುಚಿ ಬಿದ್ದಿದೆ.
ಇದನ್ನೂ ಓದಿ:
ಕಂಟ್ರೋಲ್ ರೂಮ್ ಆರಂಭ
ಘಟನೆಯ ಬೆನ್ನಲ್ಲೇ ಹೊ ಚಿ ಮಿನ್ಹ್ ನಗರದಲ್ಲಿರುವ ಭಾರತೀಯ ಕಾನ್ಸುಲೇಟ್ ವಿಶೇಷ ಕಂಟ್ರೋಲ್ ರೂಮ್ ತೆರೆಯಿದ್ದು, ಸಂತ್ರಸ್ತರ ಕುಟುಂಬಗಳಿಗೆ ಮಾಹಿತಿ ಹಾಗೂ ನೆರವು ನೀಡಲು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ಪ್ರಕ್ಷುಬ್ಧ ಸಮುದ್ರದ ನಡುವೆಯೂ ಸ್ಥಳೀಯ ರಕ್ಷಣಾ ತಂಡಗಳು ಹಾಗೂ ಹತ್ತಿರದಲ್ಲಿದ್ದ ದೋಣಿಗಳ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ರಕ್ಷಣಾ ಕಾರ್ಯಾಚರಣೆಯ ದೃಶ್ಯಗಳು ಹರಿದಾಡುತ್ತಿವೆ. ಸ್ಥಳೀಯ ಮಾಧ್ಯಮಗಳು ಸಾವುನೋವು ಸಂಭವಿಸಿರುವುದಾಗಿ ವರದಿ ಮಾಡಿದ್ದರೂ, ವಿಯೆಟ್ನಾಂ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.



