Wednesday, June 7, 2023

Latest Posts

SHOCKING | ಕೇರಳದಲ್ಲಿ ದೋಣಿ ದುರಂತ: 21 ಸಾವು, ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಮಲಪ್ಪುರಂನಲ್ಲಿ ಭೀಕರ ದೋಣಿ ಅವಘಡ ಸಂಭವಿಸಿದ್ದು, 21 ಮಂದಿ ಮೃತಪಟ್ಟಿದ್ದಾರೆ.

ತಾನೂರ್ ಬೀಚ್ ಬಳಿ ಈ ಘಟನೆ ನಡೆದಿದ್ದು, ಬೋಟ್‌ನಲ್ಲಿ 40 ಮಂದಿ ಇದ್ದರು ಎನ್ನಲಾಗಿದೆ, ಈಗಾಗಲೇ 19 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ದುರಂತದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಸಮುದ್ರ ತೀರದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಅಪಘಾತದಲ್ಲಿ ಮಕ್ಕಳು, ಪುರುಷರು ಹಾಗೂ ಮಹಿಳೆಯರು ಮೃತಪಟ್ಟಿದ್ದು, ಗುರುತು ಇನ್ನೂ ಸಿಕ್ಕಿಲ್ಲ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಂತಾಪ ಸೂಚಿಸಿದ್ದು, ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಿದ್ದರು. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!