ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಆನೇಕಲ್ ನ ಪ್ರಸಿದ್ಧ ಐತಿಹಾಸಿಕ ಹುಸ್ಕೂರಿನ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಆನೇಕಲ್ ತಾಲ್ಲೂಕಿನ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ಈ ದುರ್ಘಟನೆ ನಡೆದಿದೆ. ಜಾತ್ರೆಗೆ ಗ್ರಾಮಗಳಿಂದ 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಮದ್ದೂರಮ್ಮ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ ಮೂಲಕ ಎಳೆದು ತರುವ ಹೆಸರಾಂತ ಜಾತ್ರೆ ಇದು. ಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ.
ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ಕಳೆದ ವರ್ಷ ಹೀಲಲಿಗೆ ತೇರು ಬಿದ್ದಿತ್ತು. ಜಾತ್ರೆಮಯ ಸಂಭ್ರಮದ ದಿನ ಸೂತಕದ ಛಾಯೆ ಆವರಿಸಿದೆ.