JOB | ಬ್ಯಾಂಕ್‌ ಆಫ್‌ ಬರೋಡಾದಲ್ಲಿ 157 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬ್ಯಾಂಕ್‌ ಆಫ್‌ ಬರೋಡಾದಲ್ಲಿ 157 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸಿಎ, ಸ್ನಾತಕೋತ್ತರ ಪದವಿ, ಸಿಎಂಎ, ಸಿಎಸ್‌, ಸಿಎಫ್‌ಎ ವಿದ್ಯಾರ್ಹತೆ ಜೊತೆಗೆ ಕನಿಷ್ಟ 25 ರಿಂದ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 89,890/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 17,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!