ಜಿಂಕೆ ಪಾರ್ಕ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಯುವಕ-ಯುವತಿ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯನೈಋತ್ಯ ಜಿಲ್ಲೆಯ ಜಿಂಕೆ ಉದ್ಯಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕ, ಬಾಲಕಿಯ ಶವ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣದಂತೆ ಕಂಡುಬರುತ್ತಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಶವಗಳನ್ನು ಮರದಿಂದ ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಭಾನುವಾರ ಬೆಳಿಗ್ಗೆ ಇಲ್ಲಿ, ಅಪ್ರಾಪ್ತ ಜೋಡಿಯ ಶವಗಳು ಮರಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಪೊಲೀಸರು ಆತ್ಮಹತ್ಯೆಯ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಪೊಲೀಸರ ಪ್ರಕಾರ, ಡೀರ್ ಪಾರ್ಕ್‌ನ ಭದ್ರತಾ ಸಿಬ್ಬಂದಿಯೊಬ್ಬರು ಬೆಳಿಗ್ಗೆ 6.31 ಕ್ಕೆ ಪಿಸಿಆರ್‌ಗೆ ಕರೆ ಮಾಡಿ ಶವ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದರು. ಮೃತ ಹುಡುಗ ಮತ್ತು ಹುಡುಗಿಯ ವಯಸ್ಸು ಸುಮಾರು 17 ವರ್ಷಗಳು ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಗ ಕಪ್ಪು ಟಿ-ಶರ್ಟ್ ಮತ್ತು ನೀಲಿ ಜೀನ್ಸ್ ಧರಿಸಿದ್ದನು ಮತ್ತು ಹುಡುಗಿ ಹಸಿರು ಬಟ್ಟೆ ಧರಿಸಿದ್ದಾಳೆ.

ಈ ಇಬ್ಬರು ಸಾಯುವ ನಿರ್ಧಾರ ಏಕೆ ಮಾಡಿರಬಹುದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತಯಾಗಿಲ್ಲ. ಯಾವುದೇ ಡೆತ್​ನೋಟ್ ಕೂಡ ಸಿಕ್ಕಿಲ್ಲ.ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!