ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಿಂದ ನೇರವಾಗಿ ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿರುವ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು,ಅವರ ಮನೆಯಲ್ಲೇ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಲಿದೆ.
ಲೀಲಾವತಿ ಅವರ ಮನೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ, ಸೋಲೋದೇವನಹಳ್ಳಿಯ ಫಾರ್ಮ್ನ ಮುಂಭಾಗವೇ ಅಂತ್ಯಸಂಸ್ಕಾರ ನೆರವೇರಲಿದೆ.
ಸಂಜೆ 4 ಗಂಟೆಯಿಂದ ಲೀಲಾವತಿ ಅವರ ಅಂತಿಮ ವಿಧಿ ವಿಧಾನಗಳು ಆರಂಭವಾಗಲಿದ್ದು, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿತ್ತು. ಹಿರಿಯ ಕಲಾವಿದೆಯ ನಿಧನಕ್ಕೆ ರಾಜಕೀಯ ನಾಯಕರು, ಸಿನಿಮಾ ರಂಗದವರು ಸಂತಾಪ ಸೂಚಿಸಿದ್ದಾರೆ.