September 28, 2026
Monday, September 28, 2026
spot_img

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯ ಶವ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಮೃತದೇಹ ಪತ್ತೆಯಾಗಿದೆ.

ಸಾಕೇತ್ ಬರ್ಕ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಹಾಗೂ ಜೈವಿಕ ಅಣು ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿದ್ದರು. ಫೆಬ್ರವರಿ 9ರಂದು ಕ್ಯಾಂಪಸ್‌ನಿಂದ 1 ಕಿಲೋಮೀಟರ್ ದೂರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡ ಬಳಿಕ ಅವರ ಸುಳಿವು ಸಿಕ್ಕಿರಲಿಲ್ಲ.

ನಾಪತ್ತೆಯಾದ ನಂತರ ಲೇಕ್ ಅಂಜಾ ಮತ್ತು ಬರ್ಕ್ಲಿ ಹಿಲ್ಸ್ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಲಾಗಿತ್ತು. ಟಿಲ್ಡೆನ್ ಉದ್ಯಾನವನದ ಸಮೀಪ ಅವರ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಇದ್ದ ಬ್ಯಾಗ್ ಪತ್ತೆಯಾಗಿದ್ದರಿಂದ ಪ್ರಕರಣ ಗಂಭೀರವಾಗಿತ್ತು.

ಇದನ್ನೂ ಓದಿ:

ಇದೀಗ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ದೃಢಪಡಿಸಿದೆ. ಮೃತದೇಹವನ್ನು ಭಾರತಕ್ಕೆ ತಲುಪಿಸಲು ಸಹಾಯ ಮಾಡುವುದಾಗಿ ತಿಳಿಸಲಾಗಿದೆ.

Must Read