ಹೊಸದಿಗಂತ ವರದಿ ಮಡಿಕೇರಿ:
ಮೈಸೂರು-ಮಡಿಕೇರಿ ಹೆದ್ದಾರಿಯ ಸುಂಟಿಕೊಪ್ಪ ಪಟ್ಟಣದ ಕೆನರಾ ಬ್ಯಾಂಕ್ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಮಂಗಳವಾರ ಬೆಳಗ್ಗೆ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್ ಎದುರಿನ ಚರಂಡಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರ ಮೇಲಕ್ಕೆತ್ತಿ ಮಗಲಿಸಿದ್ದಾರೆ. ಆದರೆ ಆದಾಗಲೇ ಆತ ಮೃತಪಟ್ಟಿರುವುದು ದೃಢಪಟ್ಟಿದೆ. ಕೂಡಲೇ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿ ವ್ಯಕ್ತಿಯ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ.
ಕಳೆದ 3-4 ದಿನಗಳಿಂದ ಈ ವ್ಯಕ್ತಿ ಸುಂಟಿಕೊಪ್ಪ ಪಟ್ಟಣದಲ್ಲಿ ಓಡಾಡುತ್ತಿದ್ದುದಾಗಿ ಸಾರ್ವಜನಿಕರು ಮಾಹಿತಿ ನೀಡಿದ್ದು, ಆತನ ಕೈಯಲ್ಲಿ ಆಶಾ, ಪಲ್ಲವಿ ಇನ್ನಿತರ ಹೆಸರುಗಳನ್ನು ಹಚ್ಚೆ ಹಾಕಿಸಿರುವುದು ಕಂಡು ಬಂದಿದೆ. ಈ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆಗೆ (9480804953) ತಿಳಿಸುವಂತೆ ಪೊಲೀಸರು ಕೋರಿದ್ದಾರೆ.