ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಮುಜಾಫರ್ ಪುರ್ʼನ ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕೆಲಸ ಮಾಡುತ್ತಿದ್ದ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ 10 ಕ್ಕೂ ಅಧಿಕ ಕಾರ್ಮಿಕರು ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನಗರದ ಬೆಲಾ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಕಾರ್ಖಾನೆಯಲ್ಲಿ ಉಂಟಾದ ಸ್ಫೋಟ ಪ್ರಬಲವಾಗಿದ್ದು, ಅದರ ಶಬ್ದ ಸುಮಾರು 5 ಕಿಮೀ ದೂರದವರೆಗೆ ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ರಭಸಕ್ಕೆ ಅಲ್ಲಿಯೇ ಸುತ್ತಮುತ್ತ ಇದ್ದ ಕೆಲವು ಕಟ್ಟಡಗಳೂ ಧ್ವಂಸಗೊಂಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.