ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕೃಷ್ಣನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೊಂದು ಬಾಯ್ಲರ್ ಸ್ಫೋಟಗೊಂಡಿದೆ.
ಅದೃಷ್ಟವಶಾತ್ ಕಾರ್ಮಿಕರಿಗೆ ಯಾವುದೇ ಗಾಯಗಳಾಗಿಲ್ಲ. 15 ಮಂದಿ ನೌಕರರು ಬೆಳಗ್ಗೆ ಚಹಾ ಕುಡಿಯಲು ಹೋದಾಗ ಬಾಯ್ಲರ್ ಸ್ಫೋಟಗೊಂಡಿದೆ. ಸಕಾಲದಲ್ಲಿ ಕಾರ್ಮಿಕರು ಪಾರಾದ ಕಾರಣ ಭಾರೀ ಅನಾಹುತ ತಪ್ಪಿದೆ.
ಘಟನೆ ಕುರಿತು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.