Thursday, February 9, 2023

Latest Posts

ನಾಸಿಕ್​​ನಲ್ಲಿರುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಮಹಿಳೆ ಸಾವು, 17 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ರಾಸಾಯನಿಕ ಕಂಪನಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಡೆಗಾಂವ್ ಗ್ರಾಮದ ಕಾರ್ಖಾನೆಯಲ್ಲಿ ಭಾರಿ ಬಾಯ್ಲರ್ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಂದಾಲ್ ಕಂಪನಿಗೆ ಸೇರಿದ ಪಾಲಿ ಫಿಲ್ಮ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.
ಅಗ್ನಿಶಾಮಕ ವಾಹನಗಳು, ಪೊಲೀಸರು ಮತ್ತು ವಿಪತ್ತು ನಿರ್ವಹಣೆ ತಂಡಗಳು ಸ್ಥಳಕ್ಕೆ ಧಾವಿಸಿವೆ. ಸ್ಫೋಟವು ಬೆಂಕಿಗೆ ಕಾರಣವಾಯಿತು. ಘಟನೆಯಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.
ಸಾಮಾನ್ಯವಾಗಿ 20ರಿಂದ 25 ಮಂದಿ ಸ್ಥಾವರದಲ್ಲಿ ಕೆಲಸ ಮಾಡುತ್ತಾರೆ. ಆದರೆ, ಹೊಸ ವರ್ಷದ ಮೊದಲ ದಿನವಾದ್ದರಿಂದ ಭಾನುವಾರ ಈ ಸಂಖ್ಯೆ ಕಡಿಮೆಯಾಗಿತ್ತು.
ಸ್ಫೋಟದ ಭಾರೀ ಸದ್ದು ಹತ್ತಿರದ ಹಳ್ಳಿಗಳಿಗೆ ಕೇಳಿದ್ದು, ಬೆಂಕಿ ಮತ್ತು ಹೊಗೆ ದೂರದಿಂದಲೇ ಕಾಣುತ್ತಿತ್ತು. ಗಾಯಗೊಂಡ 11 ಜನರನ್ನು ನಾಸಿಕ್‌ನ ಸುಯಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!